ನವದೆಹಲಿ: ಕೊರೋನಾದ ರಣಕೇಕೆ ಮುಂದುವರಿದಿದೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 56 ಲಕ್ಷ ದಾಟಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 83,347 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ದೇಶದ ಕೊರೋನಾ ಸೋಂಕಿತರ ಸಂಖ್ಯೆ 56 46 011 ಕ್ಕೆ ತಲುಪಿದೆ. ವಿವಿಧ ಆಸ್ಪತ್ರೆಗಳಲ್ಲಿ 9, 68, 377 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾದಿಂದ 1085ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಇದೀಗ 90020ಕ್ಕೆ ತಲುಪಿದೆ.
ಕೊರೋನಾ ಸೋಂಕಿತರಾಗಿದ್ದ 45, 87, 614 ಮಂದಿ ಗುಣಮುಖರಾಗಿದ್ದಾರೆ. ಕೊರೋನಾ ನಿಯಂತ್ರಣ ಸಂಬಂಧ ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೊ ಸಂವಾದ ನಡೆಸಲಿದ್ದಾರೆ.