newsics.com
ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ ಅಬ್ಬರಿಸುತ್ತಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ 1174 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 84,372ಕ್ಕೆ ತಲುಪಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 96,424 ಮಂದಿಗೆ ಕೊರೋನಾ ಸೋಂಕು ತಗುಲಿದೆ.. ಇದೀಗ ಕೊರೋನಾ ಸೋಂಕಿತರ ಸಂಖ್ಯೆ 52,14,678ಕ್ಕೆ ತಲುಪಿದೆ.
ಕೊರೋನಾ ಸೋಂಕಿಗೆ ತುತ್ತಾಗಿದ್ದ 41,12,552 ಮಂದಿ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿತ 10,17,754 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನವೆಂಬರ್ ವೇಳೆಗೆ ದೇಶದಲ್ಲೂ ಸಿಗಲಿದೆಯಂತೆ ರಷ್ಯಾದ ‘ಸ್ಪುಟ್ನಿಕ್’ ಲಸಿಕೆ