ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ ಮುಂದುವರಿದಿದೆ. ಹೊಸದಾಗಿ ಕೊರೋನಾ 1201 ಮಂದಿಯ ಬಲಿಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ 77,472ಕ್ಕೆ ತಲುಪಿದೆ. ಒಂದೇ ದಿನದಲ್ಲಿ ದಾಖಲೆ ಮಂದಿಗೆ ಕೊರೋನಾ ಸೋಂಕು ತಗುಲಿದೆ. 24 ಗಂಟೆ ಅವಧಿಯಲ್ಲಿ 97, 570 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 46 ಲಕ್ಷ ದಾಟಿದೆ. ಇದೀಗ ಕೊರೋನಾ ಸೋಂಕಿತರ ಸಂಖ್ಯೆ 46, 59, 985ಕ್ಕೆ ತಲುಪಿದೆ. ಕೊರೋನಾ ಸೋಂಕಿಗೆ ತುತ್ತಾಗಿದ್ದ 36, 24, 197 ಮಂದಿ ಗುಣಮುಖರಾಗಿದ್ದಾರೆ.
ದೇಶದ ವಿವಿಧ ಆಸ್ಪತ್ರೆಗಳಲ್ಲಿ ಇದೀಗ ಕೊರೋನಾ ಸೋಂಕಿತ 9, 58, 316 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ ಪ್ರಕರಣ ವರದಿಯಾಗಿತ್ತು