ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ ಅಟ್ಟಹಾಸ ಮೆರೆದಿದೆ. ಕಳೆದ 24 ಗಂಟೆಯಲ್ಲಿ ಕೊರೋನಾಕ್ಕೆ 1247 ಮಂದಿ ಬಲಿಯಾಗಿದ್ದಾರೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ 85, 619ಕ್ಕೆ ತಲುಪಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 93, 337ಮಂದಿಗೆ ಕೊರೋನಾ ಸೋಂಕು ತಗುಲಿದೆ.. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 53 ಲಕ್ಷ ದಾಟಿದೆ. ಇದೀಗ 53, 08, 015 ಮಂದಿ ಕೊರೋನಾ ಸೋಂಕಿತರಿದ್ದಾರೆ.
ಕೊರೋನಾ ಸೋಂಕಿಗೆ ತುತ್ತಾಗಿದ್ದ 42, 08, 432 ಮಂದಿ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತ 10, 13, 964 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.