Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 14, 849 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.54,533 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ 155 ಮಂದಿಯ ಪ್ರಾಣ ಕಸಿದುಕೊಂಡಿದೆ. ಮಾರಕ ಕೊರೋನಾ ಇದುವರೆಗೆ 1,53,339 ಮಂದಿಯ ಪ್ರಾಣ ಅಪಹರಿಸಿದೆ.
ಕೊರೋನಾ ಸೋಂಕಿಗೆ ತುತ್ತಾಗಿದ್ದ 1,03, 16,786 ಮಂದಿ ಸೋಂಕಿನಿಂದ ಮುಕ್ತಿ ಪಡೆದಿದ್ದಾರೆ.
ವಿವಿಧ ಆಸ್ಪತ್ರೆಗಳಲ್ಲಿ 1, 84, 408 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಕೊರೋನಾ ಸೋಂಕಿಗೆ ತುತ್ತಾಗಿದ್ದ 15,948 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ದೇಶದಲ್ಲಿ 15, 82, 201 ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದೆ