Saturday, April 17, 2021

ಕೊರೋನಾ ಮಹಾಮಾರಿಗೆ ಮುಂಬೈನಲ್ಲಿ ಒಂದೇ ದಿನ 32 ಮಂದಿ ಬಲಿ

ಮುಂಬೈ: ಮಾರಕ ಕೊರೋನಾ ಮಹಾರಾಷ್ಟ್ರದಲ್ಲಿ ಭೀತಿಯ ಅಲೆಯನ್ನೇ ಸೃಷ್ಟಿಸಿದೆ. ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಕೊರೋನಾ ಒಂದೇ ದಿನ 32 ಮಂದಿಯನ್ನು ಬಲಿಪಡೆದಿದೆ. ಮಹಾರಾಷ್ಟ್ರದಲ್ಲಿ 24 ಗಂಟೆ ಅವಧಿಯಲ್ಲಿ 105 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೊರೋನಾಕ್ಕೆ ಅತೀ ಹೆಚ್ಚು ಮಂದಿ ಮಹಾರಾಷ್ಟ್ರದಲ್ಲಿ  ಪ್ರಾಣ ಕಳೆದುಕೊಂಡಿದ್ದಾರೆ. ಮುಂಬೈ ಮಹಾನಗರದಲ್ಲಿ ಪೊಲೀಸ್ ಇಲಾಖೆ ಕೂಡ ಕೊರೋನಾ ದಾಳಿಗೆ ತುತ್ತಾಗಿದೆ. 1800ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ 20 ಪೊಲೀಸ್ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮುಂಬೈನ ಧಾರಾವಿ ಕೊಳಗೇರಿಯಲ್ಲಿ ಪರಿಸ್ಥಿತಿ ಈಗಲೂ ಸುಧಾರಣೆ ಕಂಡು ಬಂದಿಲ್ಲ. ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದರೂ ಮಹಾರಾಷ್ಟ್ರದಲ್ಲಿ ರೋಗಿಗಳಿಗೆ  ಬೆಡ್ ಗಳ ಕೊರತೆ ಎದುರಾಗಿದೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!