Saturday, April 17, 2021

ದೇಶದಲ್ಲಿ 24 ಗಂಟೆಯಲ್ಲಿ ಕೊರೋನಾಕ್ಕೆ 325 ಬಲಿ, 11, 502 ಮಂದಿಗೆ ಸೋಂಕು

ನವದೆಹಲಿ:  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 11, 502 ಕೊರೋನಾ ಪ್ರಕರಣ ವರದಿಯಾಗಿದೆ. ಇದು  ಕೊರೋನಾ ಬೆಳಕಿಗೆ ಬಂದ ಬಳಿಕದ ಅತ್ಯಧಿಕ ಸಂಖ್ಯೆಯಾಗಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 3, 32, 424ಕ್ಕೆ ತಲುಪಿದೆ. ಇವರಲ್ಲಿ 1, 53, 106 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ  325 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಕೊರೋನಾಕ್ಕೆ ದೇಶದಲ್ಲಿ ಬಲಿಯಾದವರ ಸಂಖ್ಯೆ  9520ಕ್ಕೆ ಏರಿದೆ. ಜನವರಿ 30ರಂದು ದೇಶದ ಮೊದಲ  ಕೊರೋನಾ ಪ್ರಕರಣ ಕೇರಳದ ತ್ರಿಶ್ಯೂರ್ ನಲ್ಲಿ ದೃಢಪಟ್ಟಿತ್ತು,  ರಾಜ್ಯದ ಕಲಬುರ್ಗಿಯಲ್ಲಿ ಕೊರೋನಾ ದೇಶದ ಮೊದಲ ಬಲಿ ಪಡೆದಿತ್ತು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!