Saturday, April 17, 2021

ದೇಶದಲ್ಲಿ 24 ಗಂಟೆಯಲ್ಲಿ 14, 821 ಮಂದಿಗೆ ಕೊರೋನಾ ಸೋಂಕು, 445 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 14, 821 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 4, 25, 282 ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 1, 74, 387 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರಕ ಕೊರೋನಾ ಒಂದೇ ದಿನದಲ್ಲಿ 445 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 13, 699ಕ್ಕೆ ಏರಿದೆ. ಕೊರೋನಾ ಗೋವಾದಲ್ಲಿ ಖಾತೆ ಆರಂಭಿಸಿದೆ. 85 ವರ್ಷದ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಗೋವಾದಲ್ಲಿ ನಿಧನ ಹೊಂದಿದ್ದಾರೆ. ಇದು ಗೋವಾದಲ್ಲಿ ಕೊರೋನಾದಿಂದ ಮೃತಪಟ್ಟ ಮೊದಲ ಪ್ರಕರಣವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!