ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 38, 902 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10, 77, 618ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 3, 73, 379 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 543 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 26, 816ಕ್ಕೆ ತಲುಪಿದೆ. ದೇಶದ ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ಮುಖ್ಯವಾಗಿ ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿದೆ.
ದೇಶದಲ್ಲಿ ಕೊರೋನಾ ಪ್ರಕರಣ ಇದೇ ಪ್ರಮಾಣದಲ್ಲಿ ವರದಿಯಾದರೆ ಮುಂದಿನ ಒಂದೆರಡು ದಿನಗಳಲ್ಲಿ ಭಾರತ, ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವ ಆತಂಕ ಎದುರಾಗಿದೆ. ಕೆಲವು ಅಂತಾರಾಷ್ಟ್ರೀಯ ಮಾಧ್ಯಮಗಳು ಭಾರತ ಈಗಾಗಲೇ ಎರಡನೇ ಸ್ಥಾನಕ್ಕೆ ತಲುಪಿದೆ ಎಂದು ವರದಿ ಮಾಡಿವೆ.