ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 28, 637 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 8, 49, 553ಕ್ಕೆ ಏರಿದೆ. ವಿವಿಧ ಆಸ್ಪತ್ರೆಗಳಲ್ಲಿ 2, 92, 258 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶದಲ್ಲಿ ಒಂದೇ ದಿನದಲ್ಲಿ 551 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 22, 674ಕ್ಕೆ ತಲುಪಿದೆ. ಮಹಾರಾಷ್ಟ್ರ ಈಗಲೂ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
ಈ ಮಧ್ಯೆ ಕೊರೋನಾ ಸೋಂಕಿಗೆ ತುತ್ತಾಗಿರುವ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ. ನಾನಾವತಿ ಆಸ್ಪತ್ರೆಯ ವೈದ್ಯಕೀಯ ಪ್ರಕಟಣೆಯಲ್ಲಿ ಬಚ್ಚನ್ ಆರೋಗ್ಯದ ಮಾಹಿತಿ ನೀಡಲಾಗಿದೆ