ನವದೆಹಲಿ: ದೇಶದಲ್ಲಿ ಮಾರಕ ಕೊರೋನಾದ ರಣಕೇಕೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 47,704 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 14, 83, 157ಕ್ಕೆ ತಲುಪಿದೆ. ನಾಳೆ ಒಟ್ಟೂ ಸೋಂಕಿತರ ಸಂಖ್ಯೆ 15 ಲಕ್ಷ ಮೀರುವ ಸಾಧ್ಯತೆಯಿದೆ.
ದೇಶದ ಕೋವಿಡ್ ನಿಯೋಜಿತ ಆಸ್ಪತ್ರೆಗಳಲ್ಲಿ 4, 96, 988 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಐದು ಲಕ್ಷಕ್ಕೆ ಹತ್ತಿರದಲ್ಲಿದೆ. ಕೊರೋನಾ ಕಳೆದ 24 ಗಂಟೆಯಲ್ಲಿ 654 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ಇದೀಗ 33, 425ಕ್ಕೆ ತಲುಪಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೊರೋನಾ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಕೊರೋನಾ ಇದೀಗ ಕಾಡ್ಗಿಚ್ಚಿನಂತೆ ಹರಡುತ್ತಿದೆ.