ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 34, 884 ಮಂದಿ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ 10,38,716ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 3,58,692 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆ ಅವಧಿಯಲ್ಲಿ 671 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ 26, 273ಕ್ಕೆ ತಲುಪಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೊರೋನಾದ ಮಹಾ ಸ್ಫೋಟ ಸಂಭವಿಸಿದೆ.
ಕೊರೋನಾ ಸೋಂಕಿತರಾದ 6, 53, 751 ಮಂದಿ ಗುಣಮುಖರಾಗಿದ್ದಾರೆ. ಇದೇ ವೇಳೆ ಕೇರಳದಲ್ಲಿ ಸಮುದಾಯ ಮಟ್ಟದಲ್ಲಿ ಕೊರೋನಾ ಹರಡುವಿಕೆ ದೃಢೀಕರಿಸಲಾಗಿದೆ.