Saturday, April 17, 2021

ಒಂದೇ ದಿನ 1,26,789 ಮಂದಿಗೆ ಕೊರೋನಾ ಸೋಂಕು 685 ಜನರ ಸಾವು

newsics.com

ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ  ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 1,26,789  ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,29,28,574  ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 685 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 1,66,862 ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ  1,18,51,393  ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 9,10,319  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ಕೊರೋನಾ ಸೋಂಕಿತರಾಗಿದ್ದ, 59,258  ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 9,01,98,673

ಮಂದಿಗೆ ಕೊರೋನಾ ತಡೆ ಲಸಿಕೆ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!