Sunday, July 3, 2022

ದೇಶದಲ್ಲಿ 24 ಗಂಟೆಯಲ್ಲಿ 52, 123 ಮಂದಿಗೆ ಕೊರೋನಾ ಸೋಂಕು 775 ಬಲಿ

Follow Us

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಅಷ್ಟ ದಿಕ್ಕುಗಳಿಗೂ ಹರಡುತ್ತಿದೆ. ಕಳೆದ 24 ಗಂಟೆ ಅವದಿಯಲ್ಲಿ ಹೊಸದಾಗಿ 52, 123  ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಕೊರೋನಾ ಪ್ರಕರಣ  ಒಂದೇ ದಿನ 50000 ಕ್ಕೂ ಹೆಚ್ಚು ವರದಿಯಾಗಿರುವುದು ಆತಂಕ ಸೃಷ್ಟಿಸಿದೆ. ಇದು ಇದುವರೆಗಿನ ಅತ್ಯಧಿಕ ಪ್ರಕರಣವಾಗಿದೆ. ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ ಪ್ರಕರಣ ವರದಿಯಾಗಿತ್ತು.

ಕೊರೋನಾ ಸೋಂಕಿತರ ಸಂಖ್ಯೆ  ಇದೀಗ 16 ಲಕ್ಷದ ಅಂಚಿನಲ್ಲಿದೆ . 15, 83, 792 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ 5, 28, 242 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆ ಅವಧಿಯಲ್ಲಿ ಮಾರಕ ಕೊರೋನಾ  775 ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 34, 968ಕ್ಕೆ ತಲುಪಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!