Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 10584 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,10,16, 434ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ 78 ಮಂದಿಯ ಪ್ರಾಣ ಕಸಿದುಕೊಂಡಿದೆ. ಮಾರಕ ಕೊರೋನಾ ಇದುವರೆಗೆ 1,56 ,463 ಮಂದಿಯ ಪ್ರಾಣ ಅಪಹರಿಸಿದೆ.
ಕೊರೋನಾ ಸೋಂಕಿಗೆ ತುತ್ತಾಗಿದ್ದ 1,07,12,665 ಮಂದಿ ಸೋಂಕಿನಿಂದ ಮುಕ್ತಿ ಪಡೆದಿದ್ದಾರೆ.
ವಿವಿಧ ಆಸ್ಪತ್ರೆಗಳಲ್ಲಿ 1,47,306 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಕೊರೋನಾ ಸೋಂಕಿಗೆ ತುತ್ತಾಗಿದ್ದ 13255 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 1,17, 45,552ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದೆ