ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 19 ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 52, 509 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 19, 08, 255ಕ್ಕೆ ಏರಿದೆ.
ದೇಶದ ವಿವಿಧ ಆಸ್ಪತ್ರೆಗಳಲ್ಲಿ 5, 86, 244 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೊರೋನಾಕ್ಕೆ 857 ಮಂದಿ ಬಲಿಯಾಗಿದ್ದಾರೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ 39, 795ಕ್ಕೆ ತಲುಪಿದೆ.