Tuesday, April 13, 2021

ದೇಶದಲ್ಲಿ 15000 ಗಡಿ ದಾಟಿದ ಕೊರೋನಾ ಬಲಿ

ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ 15,000ಕ್ಕೂ ಹೆಚ್ಚು ಮಂದಿಯ ಬಲಿ ಪಡೆದುಕೊಂಡಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 407 ಮಂದಿಯ ಪ್ರಾಣ ಅಪಹರಿಸಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 15, 301ಕ್ಕೆ ಏರಿದೆ. ಅತ್ಯಧಿಕ ಮಂದಿ ಮಹಾರಾಷ್ಟ್ರದಲ್ಲಿ ಕೊರೋನಾಕ್ಕೆ ಬಲಿಯಾಗಿದ್ದಾರೆ.  ಇದೇ ವೇಳೆ ಒಂದೇ ದಿನದಲ್ಲಿ ಹೊಸದಾಗಿ 17, 296 ಮಂದಿಗೆ ಸೋಂಕು ತಗುಲಿದೆ. ಇದು ಕೂಡ ದಾಖಲೆಯಾಗಿದೆ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 4, 90, 401ಕ್ಕೆ ಏರಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ  2, 85, 637 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ ಕಲಬುರ್ಗಿಯಲ್ಲಿ ಮಾರಕ ಕೊರೋನಾ ಮೊದಲ ಬಲಿ ಪಡೆದಿತ್ತು.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!