Tuesday, April 13, 2021

ಕೊರೋನಾಕ್ಕೆ ಬಳ್ಳಾರಿಯಲ್ಲಿ ವೃದ್ಧ ಬಲಿ

ಬಳ್ಳಾರಿ:  ಮಾರಕ ಕೊರೋನಾ ಬಳ್ಳಾರಿಯಲ್ಲಿ ವೃದ್ಧರೊಬ್ಬರನ್ನು ಬಲಿಪಡೆದುಕೊಂಡಿದೆ. ಸತ್ಯನಾರಾಯಣ ಪೇಟೆ ನಿವಾಸಿಯಾಗಿದ್ದ 61 ವರ್ಷ ಪ್ರಾಯದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ. ಶನಿವಾರ ಅವರಲ್ಲಿ ರೋಗ ಲಕ್ಷಣ ಕಾಣಿಸಿಕೊಂಡಿತ್ತು. ಮೃತ ರೋಗಿ ಮಧುಮೇಹ ಮತ್ತು ಇತರ ಕಾಯಿಲೆಗಳಿಂದ ಕೂಡ ಬಳಲುತ್ತಿದ್ದರು ಎಂದು ವರದಿಯಾಗಿದೆ. ಕೊರೋನಾದಿಂದ ಮೃತಪಟ್ಟಿರುವುದನ್ನು  ಬಳ್ಳಾರಿ ಜಿಲ್ಲಾಧಿಕಾರಿ ಖಚಿತಪಡಿಸಿದ್ದಾರೆ. ಈ ಮಧ್ಯೆ ಶಿವಮೊಗ್ಗದಲ್ಲಿ ಹೊಸದಾಗಿ 10 ಮಂದಿಗೆ ಕೊರೋನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಇವರೆಲ್ಲ ಮುಂಬೈ ಮತ್ತು ಕೇರಳದಿಂದ ಬಂದವರಾಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯದಲ್ಲಿ  ಇತ್ತೀಚಿನ ದಿನಗಳಲ್ಲಿ ದಾಖಲೆ ಸಂಖ್ಯೆಯಲ್ಲಿ  ಕೊರೋನಾ ಪ್ರಕರಣ ವರದಿಯಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!