Tuesday, April 13, 2021

ಕೊರೋನಾಕ್ಕೆ ಬೆಂಗಳೂರಿನಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿ

ಬೆಂಗಳೂರಿನಲ್ಲಿ: ಮಾರಕ ಕೊರೋನಾಕ್ಕೆ ರಾಜ್ಯದಲ್ಲಿ ಬಲಿಯಾದ ಪೊಲೀಸ್ ಸಿಬ್ಬಂದಿ ಸಂಖ್ಯೆ ಎರಡಕ್ಕೆ ಏರಿದೆ. ಶನಿವಾರ ಕಲಾಸಿ ಪಾಳ್ಯ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ. ಅವರಿಗೆ 56 ವರ್ಷ ಪ್ರಾಯವಾಗಿತ್ತು. ಮೂರು ದಿನಗಳ ಹಿಂದೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರು ಎಳೆದಿದ್ದಾರೆ. ಇದರೊಂದಿಗೆ ಕೊರೋನಾಕ್ಕೆ ಬಲಿಯಾದ ಪೊಲೀಸ್ ಸಿಬ್ಬಂದಿ ಸಂಖ್ಯೆ ಎರಡಕ್ಕೆ ಏರಿದೆ. ಕೊರೋನಾ ಪೊಲೀಸರ ಕರ್ತವ್ಯ ನಿರ್ವಹಣೆ ಮೇಲೂ ತೀವ್ರ ಪರಿಣಾಮ ಬೀರಿದೆ. ಕಳೆದ 19 ದಿನಗಳಲ್ಲಿ ಬೆಂಗಳೂರಿನಲ್ಲಿ ಕೊರೋನಾ 46 ಮಂದಿಯನ್ನು ಬಲಿಪಡೆದಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!