Sunday, July 3, 2022

ದೇಶದಲ್ಲಿ ಮೊದಲ ಬಾರಿಗೆ ಸಮುದಾಯ ಮಟ್ಟದಲ್ಲಿ ಕೊರೋನಾ ಹರಡುವಿಕೆ ದೃಢೀಕರಣ

Follow Us

ತಿರುವನಂತಪುರಂ: ದೇಶದಲ್ಲಿ ಮೊದಲ ಬಾರಿಗೆ ಸಮುದಾಯ ಮಟ್ಟದಲ್ಲಿ ಕೊರೋನಾ ಹರಡುವಿಕೆಯನ್ನು ಕೇರಳದಲ್ಲಿ ಅಧಿಕೃತವಾಗಿ  ದೃಢೀಕರಿಸಲಾಗಿದೆ. ಇದು ಇಡೀ ದೇಶಕ್ಕೆ ಅಪಾಯದ ಕರೆ ಗಂಟೆಯಾಗಿದೆ. ದೇಶದ ಮೊದಲ ಕೊರೋನಾ ಪ್ರಕರಣ ಕೂಡ ಕೇರಳದಲ್ಲಿಯೇ ವರದಿಯಾಗಿತ್ತು ಎಂಬುದು ಕೂಡ ಇಲ್ಲಿ ಗಮನಾರ್ಹ ವಿಷಯವಾಗಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪತ್ರಿಕಾಗೋಷ್ಠಿಯಲ್ಲಿ ಇದನ್ನು  ಅಧಿಕೃತವಾಗಿ  ಪ್ರಕಟಿಸಿದ್ದಾರೆ. ತಿರುವನಂತಪುರಂ ಸಮೀಪದ ಪುಲ್ಲುವಿಳಿ ಮತ್ತು ಪುತ್ತೂರಾ ಪ್ರದೇಶದಲ್ಲಿ ಸಮುದಾಯ ಮಟ್ಟದಲ್ಲಿ ಕೊರೋನಾ ಹರಡುವಿಕೆಯನ್ನು ಇದೀಗ  ದೃಢೀಕರಿಸಲಾಗಿದೆ. ಇದು ಸಮುದ್ರ ತೀರ ಪ್ರದೇಶವಾಗಿದ್ದು, ಕೊರೋನಾ ನಿಯಂತ್ರಣ ಸಂಬಂಧ ಇದನ್ನು ಮೂರು ವಲಯಗಳಾಗಿ ವಿಂಗಡಿಸಲಾಗಿದೆ. ಪ್ರತಿ ವಲಯದ ಮೇಲ್ನೋಟಕ್ಕೆ ಐಎಎಸ್ ಮತ್ತು ಐಪಿಎಸ್ ಅಧಿಕಾರಿಯ ನೇಮಕ ಮಾಡಲಾಗಿದೆ.

ಕೇರಳದಲ್ಲಿ ಇಂದು ಹೊಸದಾಗಿ 791 ಕೊರೋನಾ ಪ್ರಕರಣ ವರದಿಯಾಗಿದೆ. ಕಾಸರಗೋಡಿನಲ್ಲಿ 32 ಮಂದಿ ಹೊಸದಾಗಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಇವರಲ್ಲಿ 135 ಮಂದಿ ವಿದೇಶದಿಂದ ಹಿಂತಿರುಗಿದವರಾಗಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!