newsics.com
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರಿಂದ 20ರವರೆಗೆ ಕೊರೋನಾ ಕರ್ಫ್ಯೂ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮಣಿಪಾಲ ಹಾಗೂ ರಾಜ್ಯದ 9 ಜಿಲ್ಲಾ ಕೇಂದ್ರಗಳಲ್ಲಿ ಶನಿವಾರ ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಕೊರೋನಾ ಕರ್ಫ್ಯೂ ಜಾರಿ ಮಾಡಲಾಗುವುದು. ಬೆಂಗಳೂರು, ಮೈಸೂರು, ತುಮಕೂರು, ಉಡುಪಿ, ಮಣಿಪಾಲ, ಮಂಗಳೂರು, ಕಾರವಾರ, ಕಲಬುರಗಿ, ಬೆಳಗಾವಿ, ಬೀದರ್ ನಗರಗಳಲ್ಲಿ ಈ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದರು. ಕರ್ಫ್ಯೂ ವೇಳೆ ಬಸ್ ಹಾಗೂ ವಾಹನ ಸಂಚಾರ ಸಹಜವಾಗಿರುತ್ತದೆ. ಆದರೆ ಗುಂಪು ಸೇರುವಿಕೆ, ಮೋಜು ಮಸ್ತಿಗೆ ಬ್ರೇಕ್ ಹಾಕಲಾಗುವುದು ಎಂದರು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು. ಲಸಿಕೆ ವಿತರಣೆಗೆ ಹಾಗೂ ಕೊರೋನಾ ತಪಾಸಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.