Monday, November 29, 2021

ದೇಶದಲ್ಲಿ ಕೊರೋನಾ ಸಾವಿನ ಸಂಖ್ಯೆ 63ಕ್ಕೇರಿಕೆ; 2,547 ಸೋಂಕಿತರು

Follow Us

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 478 ಪ್ರಕರಣಗಳು ದಾಖಲಾಗಿದ್ದು. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,547ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ ಕೂಡ 63ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರವೊಂದರಲ್ಲೇ ಶುಕ್ರವಾರ 6 ಮಂದಿ ಕೊರೋನಾ ವೈರಸ್ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 490ಕ್ಕೆ ಏರಿಕೆಯಾಗಿದೆ.
ದೆಹಲಿಯಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಒಂದೇ ದಿನ ದೆಹಲಿಯಲ್ಲಿ 478 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ ಇಂದು 40 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇಲ್ಲಿ ಸೋಂಕಿತರ ಸಂಖ್ಯೆ 174ಕ್ಕೆ ಏರಿಕೆಯಾಗಿದೆ. ತೆಲಂಗಾಣದಲ್ಲಿ 75 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆ ಮೂಲಕ ಇಲ್ಲಿ ಸೋಂಕಿತರ ಸಂಖ್ಯೆ 229ಕ್ಕೆ ಏರಿಕೆಯಾಗಿದೆ. ಅಸ್ಸಾಂನಲ್ಲೂ ಇಂದು ಮತ್ತೆ 4 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಇಲ್ಲಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ತಮಿಳುನಾಡಿನಲ್ಲಿ 102 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಲ್ಲಿ ಸೋಂಕಿತರ ಸಂಖ್ಯೆ 411ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!