Sunday, July 3, 2022

ಇನ್ಮುಂದೆ ವೈದ್ಯರಿಗೆ ಕೊರೋನಾ ಡ್ಯೂಟಿ ಕಡ್ಡಾಯ

Follow Us

ಬೆಂಗಳೂರು: ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 2 ಲಕ್ಷ ತಲುಪುವ ಆತಂಕದಲ್ಲಿರುವಾಗಲೇ ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ತುರ್ತು ತೀರ್ಮಾನ ಕೈಗೊಂಡಿದ್ದು ರಾಜ್ಯದ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿದ ಎಲ್ಲ ವೈದ್ಯರುಗಳು ತಕ್ಷಣ ಕೊರೋನಾ ಚಿಕಿತ್ಸೆಯ ಡ್ಯೂಟಿಗೆ ಕಡ್ಡಾಯವಾಗಿ ಹಾಜರಾಗುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. 

ಕರ್ನಾಟಕದ 56 ವೈದ್ಯಕೀಯ ಶಿಕ್ಷಣ ಕಾಲೇಜುಗಳಿಂದ ಪ್ರತಿ ವರ್ಷ 14 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪೂರ್ತಿಗೊಳಿಸಿ ಹೊರಬರುತ್ತಿದ್ದು, ಈ ವಿದ್ಯಾರ್ಥಿಗಳು ಕೋವಿಡ್-19 ಸೇವೆಯಲ್ಲಿ ತೊಡಗಿಕೊಳ್ಳುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ.
ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಸತತ 5 ಸಾವಿರ ಕೊರೋನಾ ಪ್ರಕರಣಗಳು ವರದಿಯಾಗುತ್ತಿದ್ದು, ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಿಸುತ್ತಿದೆ.
ಪ್ರಕೃತಿ ವಿಕೋಪ ನಿರ್ವಹಣಾ ಕಾನೂನು, ಎಪಿಡೆಮಿಕ್ ಡಿಸಾಸ್ಟರ್ ಕಾಯಿದೆ 1897 ಹಾಗೂ ಕರ್ನಾಟಕದ ಕಡ್ಡಾಯ ಸೇವೆಗಳ ಕಾನೂನು ಸೇರಿದಂತೆ ವಿವಿಧ ನಿಯಮಗಳ ಅಡಿಯಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿದ ವಿದ್ಯಾರ್ಥಿಗಳಿಗೆ ಕೊವೀಡ್- 19 ಸೇವೆಗ ಹಾಜರಾಗಲು ಸೂಚಿಸಲಾಗಿದೆ. ಅಲ್ಲದೆ ಕಾಲೇಜು ಮುಖ್ಯಸ್ಥರುಗಳಿಗೆ ಸರ್ಕಾರ ಪೋಸ್ಟಿಂಗ್ ಗಾಗಿ ವಿದ್ಯಾರ್ಥಿಗಳಿಗೆ ಸರ್ಕಾರಕ್ಕೆ ರಿಪೋರ್ಟ ಮಾಡಿಕೊಳ್ಳಲು ಸೂಚಿಸುವಂತೆ ನಿರ್ದೇಶನ ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಕರ್ನಾಟಕ ಮೆಡಿಕಲ್ ಕೌನ್ಸಿಲ್ ವೈದ್ಯವೃತ್ತಿಯಲ್ಲಿರುವ ವೈದ್ಯರುಗಳಿಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಜೊತೆ ಕೈಜೋಡಿಸಿ ಕರೋನಾ ಚಿಕಿತ್ಸೆ ನೀಡಲು ಸಹಕರಿಸುವಂತೆ ಸೂಚಿಸಿತ್ತು. ಅಲ್ಲದೆ ಕರ್ನಾಟಕದ ಎಲ್ಲ ವೈದ್ಯರು ಕೊರೋನಾ ನಿಯಂತ್ರಣದ ಈ ಯುದ್ಧದಲ್ಲಿ ಸಹಕರಿಸುವಂತೆ ಕೆಎಂಸಿಯ ಅಧ್ಯಕ್ಷ ಡಾ.ಎಚ್.ವೀರಭದ್ರಪ್ಪಾ ಮನವಿ ಮಾಡಿದ್ದರು. ಈಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದರಿಂದ ಎಲ್ಲಾ ಹಾಸ್ಪಿಟಲ್‍ಗಳು ವೈದ್ಯರ ಕೊರತೆ ಎದುರಿಸುತ್ತಿದೆ. ಹೀಗಾಗಿ ಕಡ್ಡಾಯವಾಗಿ ಎಲ್ಲ ವೈದ್ಯಕೀಯ ಪದವೀಧರರು ಸರ್ಕಾರದ ಸೇವೆಗೆ ಸೇರುವಂತೆ ಸರ್ಕಾರ ಆದೇಶಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!