Monday, November 29, 2021

ಏ.30 ರವರೆಗೆ ಲಾಕ್ ಡೌನ್ ಖಚಿತ, ನಂತರ ಏನು?

Follow Us

ನವದೆಹಲಿ: ಏ.30 ರವರೆಗೆ ಲಾಕ್ ಡೌನ್ ವಿಸ್ತರಿಸಲು ಕೇಂದ್ರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಮೇ 1 ರಂದು ಲಾಕ್ ಡೌನ್ ಮುಕ್ತಾಯಗೊಂಡರೂ ಸಾರ್ವಜನಿಕ ಜೀವನ ತಕ್ಷಣ ಹಿಂದಿನ ಸ್ಥಿತಿಗೆ ಮರಳದಂತೆ ನೋಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಸರ್ಕಾರದ ಯೋಚನೆ ಪ್ರಕಾರ, ಮೇ 5ರಂದು ಧಾರ್ಮಿಕ ಪ್ರದೇಶಗಳು ಆರಂಭಗೊಳ್ಳಲಿದೆ, ಮೇ 7ರಂದು ಹಣ್ಣು ಮತ್ತು ತರಕಾರಿ ಮಾರುಕಟ್ಟೆಗಳು ಆರಂಭವಾಗಲಿವೆ.
ಮೇ 15 ರಿಂದ ರೈಲು, ದೇಶಿ ವಿಮಾನಗಳು ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಮೇ ಮೂರನೇ ವಾರದಲ್ಲಿ ಸಿನಿಮಾ ಹಾಲ್, ಮಾಲ್ ಗಳು ತೆರೆಯಲಿವೆ. ಮೇ ಅಂತ್ಯಕ್ಕೆ ಶೈಕ್ಷಣಿಕ ಸಂಸ್ಥೆಗಳು ಪುನಾರಂಭಗೊಳ್ಳಲಿವೆ.
ಜುಲೈ 30 ರಿಂದ ಅಂತಾರಾಷ್ಟ್ರೀಯ ವಿಮಾನಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಇವೆಲ್ಲವನ್ನೂ ಜಾಗತಿಕ ಮಟ್ಟದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧರಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!