Monday, November 29, 2021

ಬೆಂಗಳೂರಲ್ಲಿ ಮಾ.10ರಿಂದ 5ನೇ ತರಗತಿವರೆಗಿನ ಮಕ್ಕಳಿಗೂ ರಜೆ

Follow Us

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ರಜೆ ಘೋಷಿಸಲಾಗಿದೆ.
‘ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರು‌ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ’ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕೃತವಾಗಿ ಟ್ವೀಟ್ ಮಾಡಿದ್ದಾರೆ.
ನರ್ಸರಿ, ಎಲ್‌ಕೆಜಿ, ಯುಕೆಜಿ ಶಾಲೆಗಳಿಗೆ ಸೋಮವಾರದಿಂದಲೇ ಮುಂದಿನ ಆದೇಶದವರೆಗೂ ರಜೆ ಘೋಷಿಸಲಾಗಿದೆ.
ಆದಷ್ಟು ಶೀಘ್ರ ಪರೀಕ್ಷೆ ಮುಗಿಸುವಂತೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...

ಬಹುಕಾಲದ ಗೆಳತಿಯೊಂದಿಗೆ ಶಾರ್ದುಲ್ ಠಾಕೂರ್ ನಿಶ್ಚಿತಾರ್ಥ

newsics.com ಮುಂಬೈ: ಕ್ರಿಕೆಟಿಗ ಶಾರ್ದೂಲ್ ಠಾಕೂರ್ ತಮ್ಮ ಬಹುಕಾಲದ ಗೆಳತಿ ಮಿತ್ತಾಲಿ ಪಾರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಸರಳವಾಗಿ ನಡೆದ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಸುಮಾರು 75 ಜನರು ಭಾಗವಹಿಸಿದ್ದರು...
- Advertisement -
error: Content is protected !!