Tuesday, April 13, 2021

ಕೊರೋನಾ ಭಯದಿಂದ ಇಬ್ಬರು ಸಿಆರ್‌ಪಿಎಫ್ ಅಧಿಕಾರಿಗಳ ಆತ್ಮಹತ್ಯೆ

ಶ್ರೀನಗರ: ಕೊರೋನಾ ಭೀತಿಯಿಂದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ಯ ಇಬ್ಬರು ಅಧಿಕಾರಿಗಳು ಮಂಗಳವಾರ ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಮತ್ತನ್ ಎಂಬಲ್ಲಿ ಸಿಆರ್‌ಪಿಎಫ್ ಇನ್‌ಸ್ಪೆಕ್ಟರ್ ರಾಜಸ್ಥಾನದ ಜೈಸಲ್ಮೇರ್ ಮೂಲದ ಫತಾಹ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಗಂಟಲು ಸ್ರಾವ ಮಾದರಿ ಪಡೆಯಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಸಿಆರ್‌ಪಿಎಫ್ ಎಎಸ್‌ಐ ಕೂಡ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಈ ನಿರ್ಧಾರ ಕೈಗೊಳ್ಳಲು ಏನು ಕಾರಣ ಎನ್ನುವುದನ್ನು ಹುಡುಕುವ ಪ್ರಯತ್ನ ನಡೆದಿದೆ ಎಂದು ಸಿಆರ್‌ಪಿಎಫ್ ವಿಶೇಷ ಮಹಾನಿರ್ದೇಶಕ ಜುಲ್ಫೀಕರ್ ಹಸನ್ಸಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!