Saturday, April 17, 2021

ಕೊರೋನಾ ಹೋರಾಟ; ದೇಶದ ಸ್ಥಿತಿ ತೀರಾ ತೃಪ್ತಿಪಡುವಂತಿಲ್ಲ- ಕೇಂದ್ರ ಸರ್ಕಾರ

ನವದೆಹಲಿ: ಕೊರೋನಾ ಹರಡುವುದನ್ನು ತಡೆಯುವಲ್ಲಿ ಭಾರತ ಉತ್ತಮ ಸ್ಥಿತಿಯಲ್ಲಿದೆಯಾದರೂ ಸಮಾಧಾನಪಟ್ಟುಕೊಳ್ಳುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ16ನೇ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಕೊರೋನಾ ಹೋರಾಟದಲ್ಲಿ ಈಗಲೂ ಭಾರತ ಉತ್ತಮ ಸ್ಥಿತಿಯಲ್ಲಿಯೇ ಇದೆ. ಹಾಗೆಂದ ಮಾತ್ರಕ್ಕೆ ನಾವು ಸಮಾಧಾನಪಟ್ಟುಕೊಳ್ಳಬಾರದು. ದೇಶದ ಪ್ರತಿ ನಾಗರಿಕನೂ ಆರೋಗ್ಯಸೇತು ಆ್ಯಪ್ ಬಳಕೆ ಮಾಡಬೇಕು. ದೇಶದ ನಾಗರಿಕರು ಶಿಸ್ತಿನಿಂದ ಇರಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ನೈರ್ಮಲ್ಯ ಮತ್ತು ಉಸಿರಾಟದ ಶಿಷ್ಟಾಚಾರ ಸೇರಿದಂತೆ ಆರೋಗ್ಯ ಇಲಾಖೆ ನೀಡಲಾಗಿರುವ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟಾರೆ 4,785 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 1,29,214 ಗುಣಮುಖರಾಗಿದ್ದಾರೆ. ಸೋಂಕಿತರ ಗುಣಮುಖ ಪ್ರಮಾಣ ಶೇ.48.47ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಸೋಂಕಿತರ ಸಂಖ್ಯೆ 2,66,598ಕ್ಕೆ ಏರಿಕೆಯಾಗಿದ್ದು, 24 ಗಂಟೆಗಳಲ್ಲಿ 7,466 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ದೇಶಾದ್ಯಂತ ಮಂಗಳವಾರ 266 ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 9,987ಕ್ಕೆ ಏರಿಕೆಯಾಗಿದೆ ಎಂದು ಸಚಿವ ಹರ್ಷವರ್ಧನ್ ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!