ಬೆಂಗಳೂರು: ಕೊರೋನಾ ಭೀತಿಯಲ್ಲೇ ರಾಜ್ಯದಲ್ಲಿ 7,61,506 ವಿದ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. ಈ ಪೈಕಿ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ ಎಂದು ಸರ್ಕಾರದ ದಾಖಲೆಗಳು ದೃಢಪಡಿಸಿವೆ.
ಈ 32 ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದ 80 ವಿದ್ಯಾರ್ಥಿಗಳು ಹೋಮ್ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇವರಲ್ಲಿ ಲಕ್ಷಣ ಕಂಡು ಬಂದರೆ ಆಸ್ಪತ್ರೆಗೆ ದಾಖಲು ಮಾಡಲು ನಿರ್ಧರಿಸಲಾಗಿದೆ.
ಇನ್ನ್ಯಾಸಃತು ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗಲುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಲ್ಪಟ್ಟ ಭಾಗದ 3,911 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿಲ್ಲ. ಅನಾರೋಗ್ಯದಿಂದ 863 ವಿದ್ಯಾರ್ಥಿಗಳು ಪರೀಕ್ಷೆ ಬರೆದಿಲ್ಲ. ರಾಜ್ಯದಲ್ಲಿ ಜೂನ್ 25ರಿಂದ ಜು.3ರವರೆಗೆ ನಡೆದಿತ್ತು. ವಿರೋಧದ ನಡುವೆಯೂ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿತ್ತು.