Saturday, April 17, 2021

ಕೊರೋನಾ ಅಟ್ಟಹಾಸ; ನಾಲ್ಕನೇ ಸ್ಥಾನಕ್ಕೆ ಜಿಗಿದ ಭಾರತ!

ನವದೆಹಲಿ: ದೇಶದಲ್ಲಿ ಕೊರೋನಾ ಅಟ್ಟಹಾಸ ಮತ್ತಷ್ಟು ಹೆಚ್ಚಿದ್ದು, ಟಾಪ್ 10 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಬ್ರಿಟನ್ ದೇಶವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮೇ 24ರ ಬಳಿಕ ಗಣನೀಯವಾಗಿ ಹೆಚ್ಚಿದ್ದು, ಟಾಪ್ 10 ಪಟ್ಟಿಯಲ್ಲೇ ಇರದ ಭಾರತ ಕೇವಲ18 ದಿನಗಳಲ್ಲಿ 10 ರಿಂದ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಲಾಕ್ ಡೌನ್ ಬಳಿಕ ಆರಂಭವಾದ ಶ್ರಮಿಕ್ ರೈಲು, ವಂದೇ ಮಾತರಂ ವಿಮಾನ ಯಾನದಿಂದಾಗಿ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ ಎಂದು ತರ್ಕಿಸಲಾಗಿದೆ.
ದೇಶದಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 2,93,754ಕ್ಕೆ ಏರಿಕೆಯಾಗಿದ್ದು, ಆ ಮೂಲಕ ಭಾರತ 2,91,588 ಸೋಂಕಿತರನ್ನು ಹೊಂದಿರುವ ಬ್ರಿಟನ್ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದೆ.
ಪಟ್ಟಿಯಲ್ಲಿ 20 ಲಕ್ಷ ಸೋಂಕಿತರನ್ನು ಹೊಂದಿರುವ ಅಮೆರಿಕ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, 7.72 ಲಕ್ಷ ಸೋಂಕಿತರನ್ನು ಹೊಂದಿರುವ ಬ್ರೆಜಿಲ್ 2ನೇ ಸ್ಥಾನದಲ್ಲಿದೆ. 4.93 ಲಕ್ಷ ಸೋಂಕಿತರನ್ನು ಹೊಂದಿರುವ ರಷ್ಯಾ ಮೂರನೇ ಸ್ಥಾನದಲ್ಲಿದೆ. ಐದು ಮತ್ತು ಆರನೇ ಸ್ಥಾನದಲ್ಲಿ ಕ್ರಮವಾಗಿ ಸ್ಪೇನ್ ಮತ್ತು ಇಟಲಿ ದೇಶಗಳಿವೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!