Tuesday, April 13, 2021

ಕೊರೋನಾ ಮುಗಿದಿಲ್ಲ, ಭೀಕರತೆ ಇನ್ನೂ ಇದೆ- WHO

ವಿಶ್ವಸಂಸ್ಥೆ: ಕೊರೋನಾ ಮುಕ್ತಾಯದ ಹಂತ ತಲುಪಿಲ್ಲ. ಭೀಕರತೆಯ ಹಂತ ಇನ್ನೂ ಬರಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಕೊರೋನಾ ವೈರಸ್ ಕೊನೆಗೊಂಡಿಲ್ಲ, ಇನ್ನಷ್ಟೇ ಗಂಭೀರ ಹಂತ ತಲುಪಲಿದೆ. ಆದರೆ ಈ ರೀತಿಯ ಪರಿಸರ ಮತ್ತು ಸ್ಥಿತಿಯಲ್ಲಿ ನಾವು ಹೆಚ್ಚು ಭಯಪಡುತ್ತಿದ್ದೇವೆ. ಅದಕ್ಕಾಗಿಯೇ ನಾವು ನಮ್ಮ ಶಕ್ತಿಯನ್ನು ಒಟ್ಟಿಗೆ ತಂದು ಕೊರೋನಾ ವೈರಸ್ ವಿರುದ್ಧ ಹೋರಾಡಬೇಕಿದೆ ಎಂದು ಹೇಳಿದ್ದಾರೆ.
ಕೆಲವು ದೇಶಗಳು ಈಗಾಗಲೆ ಆರ್ಥಿಕತೆ ಮತ್ತು ಸಮಾಜಗಳನ್ನು ಮತ್ತೆ ತೆರೆದಿವೆ. ಇದರಿಂದ ಕೊರೋನಾ ವೈರಸ್ ಪ್ರಕ್ರಣಗಳು ಹೆಚ್ಚಲಿವೆ. ಇನ್ನೂ ಹೆಚ್ಚಿನ ಜನರು ಕೊರೋನಾಗೆ ತುತ್ತಾಗುತ್ತಾರೆ. ನಾವೆಲ್ಲರೂ ಕೊರೋನಾ ಸಂಪೂರ್ಣವಾಗಿ ನಾಶವಾಗಬೇಕೆಂದು ಬಯಸುತ್ತೇವೆ. ಆದರೆ ವಾಸ್ತವದಲ್ಲಿ ಕೊರೋನಾ ಮುಗಿಯುವ ಹಂತದ ಹತ್ತಿರದಲ್ಲೂ ಇಲ್ಲ. ಅನೇಕ ದೇಶಗಳು ಸ್ವಲ್ಪ ಪ್ರಗತಿ ಸಾಧಿಸಿವೆ ನಿಜ. ಆದರೆ, ಕೊರೋನಾ ಗಂಭೀರ ಹಂತಕ್ಕೆ ತಲುಪಲಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!