Tuesday, April 13, 2021

ಸರ್ಕಾರಿ ಆಸ್ಪತ್ರೆಯಿಂದ ಕೊರೋನಾ ರೋಗಿ ಪರಾರಿ

ಬೆಂಗಳೂರು: ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತನೊಬ್ಬ ನಗರದ ವಿಕ್ಟೋರಿಯಾ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.
ಬೆಂಗಳೂರಿನಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿರುವಾಗಲೇ ಇಂತಹದೊಂದು ಘಟನೆ ನಡೆದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್’ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ವ್ಯಕ್ತಿ ಬುಧವಾರ ಬೆಳಗ್ಗೆ 11.30ರ ಸುಮಾರಿಗೆ ಪರಾರಿಯಾಗಿದ್ದಾನೆ. ಕೊರೋನಾ ಸೋಂಕಿತ ವ್ಯಕ್ತಿ ಮಾರ್ಷಲ್’ಗಳ ಬಳಿ ತಾನು ಹೋಟೆಲ್’ಗೆ ಹೋಗಿ ಬರುವುದಾಗಿ ಹೇಳಿ ವಾಣಿ ವಿಲಾಸ ಆಸ್ಪತ್ರೆಯ ಮೂಲಕ ಪರಾರಿಯಾಗಿದ್ದಾನೆ. ಇದೀಗ ಕೊರೊನಾ ಸೋಂಕಿತನನ್ನು ಹುಡುಕಿಕೊಡುವಂತೆ ಆರೋಗ್ಯಾಧಿಕಾರಿಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ. ಪೊಲೀಸರು ಆಸ್ಪತ್ರೆಯ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!