ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಅಷ್ಟ ದಿಕ್ಕುಗಳಿಗೂ ಹರಡುತ್ತಿದೆ. ಕಳೆದ 24 ಗಂಟೆ ಅವದಿಯಲ್ಲಿ ಹೊಸದಾಗಿ49,931, ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಇದುವರೆಗಿನ ಅತ್ಯಧಿಕ ಪ್ರಕರಣವಾಗಿದೆ. ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ ಪ್ರಕರಣ ವರದಿಯಾಗಿತ್ತು. ಕೊರೋನಾ ಸೋಂಕಿತರ ಸಂಖ್ಯೆ ಇದೀಗ ದೇಶದಲ್ಲಿ 14 ಲಕ್ಷ ದಾಟಿದ್ದು, ಕೇಂದ್ರ ಸರ್ಕಾರದ ಕಳವಳಕ್ಕೆ ಕಾರಣವಾಗಿದೆ. ದೇಶದಲ್ಲಿನ ಕೊರೋನಾ ಸೋಂಕಿತರ ಸಂಖ್ಯೆ 14, 35, 453ಕ್ಕೆ ತಲುಪಿದೆ.
ದೇಶದ ವಿವಿಧ ಆಸ್ಪತ್ರೆಗಳಲ್ಲಿ 4, 85, 114 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
.
ಕಳೆದ 24 ಗಂಟೆ ಅವಧಿಯಲ್ಲಿ ಮಾರಕ ಕೊರೋನಾ 708ಮಂದಿಯ ಪ್ರಾಣ ಅಪಹರಿಸಿದೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 32, 771ಕ್ಕೆ ತಲುಪಿದೆ. ಮಹಾರಾಷ್ಟ್ರ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಆಂಧ್ರಪ್ರದೇಶ ಗುರುತಿಸಿಕೊಂಡಿದೆ.