ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊರೋನಾ ಸೋಂಕು ತಗುಲಿದೆ.
ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಈ ಮಾಹಿತಿ ನೀಡಿದ್ದಾರೆ. ಈವರೆಗೆ ರಾಜ್ಯದಲ್ಲಿ ಐವರು ರಾಜಕೀಯ ನಾಯಕರುಗಳಿಗೆ ಸೋಂಕು ದೃಢಪಟ್ಟಿದ್ದು, ಇದರಲ್ಲಿ ಸಿಟಿ ರವಿ ಐದನೆಯವರಾಗಿದ್ದಾರೆ. ರಾಜ್ಯದ ಸಚಿವರಲ್ಲಿ ರವಿ ಮೊದಲಿಗರು.
ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೋನಾ ತಗುಲಿದೆ. ಎಲ್ಲರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಈ ಹಿಂದೆಯೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ.ರವಿ ಎರಡು ಬಾರಿ ಸ್ವಯಂ ಕ್ವಾರಂಟೈನ್’ಗೆ ಒಳಗಾಗಿದ್ದರು. ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಸಂಸದೆ ಸುಮಲತಾ ಅಂಬರೀಶ್, ಕುಣಿಗಲ್ ಶಾಸಕ ರಂಗನಾಥ್, ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡಗೆ ಈ ಮೊದಲು ಸೋಂಕು ದೃಢಪಟ್ಟಿತ್ತು.