Saturday, April 17, 2021

ಕೆಲವು ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ಅತ್ಯಂತ ಗಂಭೀರ: ಪ್ರಧಾನಿ ಕಳವಳ

newsics.com

ನವದೆಹಲಿ:  ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳ ಸಭೆ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡುತ್ತ ಪ್ರಧಾನಿ ಈ ಕಳವಳ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಪರಿಸ್ಥಿತಿ ಎದುರಿಸಲು ಸರ್ಕಾರ ಸಮರ್ಥವಾಗಿದೆ.

ಇದಕ್ಕೆ ಅಗತ್ಯ ಇರುವ ಮೂಲ ಭೂತ ಸೌಲಭ್ಯಗಳನ್ನು ಅಭಿವೃದ್ದಿಪಡಿಸಲಾಗಿದೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ.

ಮೈಕ್ರೋ ಕಂಟೈನ್ ಮೆಂಟ್ ಜೋನ್ ಗಳನ್ನು ನಿರ್ಮಿಸುವುದರ ಮೂಲಕ ಕೊರೋನಾ ತಡೆಗಟ್ಟುವುದನ್ನು ನಿಯಂತ್ರಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

ಮುಂದಿನ ಎರಡು ಮೂರು ವಾರಗಳ ಕಾಲ ಕಠಿಣ ನಿರ್ಬಂಧ ಕ್ರಮ ಜಾರಿಗೊಳಿಸುವುದರ ಮೂಲಕ ಕೊರೋನಾ  ಹರಡುವುದನ್ನು ತಡೆಗಟ್ಟಬೇಕು  ಎಂದು ಪ್ರಧಾನಿ ಸಲಹೆ ನೀಡಿದ್ದಾರೆ.

ಇದೀಗ ಕೊರೋನಾ ಎರಡನೆ ಅಲೆ ಮೊದಲನೆ ಅಲೆಗಿಂತ ಅಪಾಯಕಾರಿಯಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!