Tuesday, April 13, 2021

ಕೊರೋನಾ; ತಮ್ಮೂರಿಗೆ ಬಸ್ ಬೇಡವೆಂದು ಸೋಲಿಗರ ಪ್ರತಿಭಟನೆ!

ಗ್ರಾಮೀಣರಲ್ಲಿ ಹೆಚ್ಚಿದ ಕೊರೋನಾ ಆತಂಕ


ಚಾಮರಾಜನಗರ: ಮೊದಲೆಲ್ಲ ತಮ್ಮೂರಿಗೆ ಬಸ್ ಬರಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದರು. ಕೊರೋನಾದಿಂದ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ.
ನಗರ ಭಾಗಗಳಲ್ಲಿ ಕೊರೋನಾ ಹರಡುವಿಕೆ ಪ್ರಮಾಣ ಜಾಸ್ತಿಯಿರುವುದೇ ಇದಕ್ಕೆಲ್ಲ ಕಾರಣ. ಇದರಿಂದ ನಗರದ ನಿವಾಸಿಗಳು ಹಳ್ಳಿಗಳ ಕಡೆ ಹೋದರೆ ಭಯದಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ್ ಪ್ರದೇಶಗಳಲ್ಲಿ ಕೊರೋನಾ ಆತಂಕ ಹೆಚ್ಚುತ್ತಿದೆ.
ಚಾಮರಾಜನಗರದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊರೋನಾ ಹೆಮ್ಮಾರಿ ಗ್ರಾಮೀಣ ಪ್ರದೇಶಗಳಿಗೂ ತನ್ನ ಕಬಂಧಬಾಹು ಚಾಚಿದೆ. ಹೆಚ್ಚಾಗಿ ಬೆಂಗಳೂರು ಮೈಸೂರು ಮತ್ತಿತರ ಹೊರ ಊರುಗಳಿಗೆ ಹೋಗಿ ಬಂದವರಿಗೆ ಕೊರೋನಾ ಸೋಂಕು ತಗುಲಿರುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನ ಆತಂಕಗೊಂಡಿದ್ದಾರೆ. ಇದೇ ಆತಂಕದಲ್ಲಿದ್ದ ಬಿಳಿಗಿರಿರಂಗನಬೆಟ್ಟದ ಹೊಸಪೋಡಿನ ಬುಡಕಟ್ಟು ಸೋಲಿಗರು ತಮ್ಮೂರಿಗೆ ಬಸ್ ಬರುವುದೇ ಬೇಡ ಎಂದು ಆಗ್ರಹಿಸಿ ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಯಳಂದೂರಿನಿಂದ ಬಿಳಿಗಿರಿರಂಗನಬೆಟ್ಟಕ್ಕೆ ಬಂದ ಕೆ.ಎಸ್.ಆರ್.ಟಿ.ಸಿ. ಬಸ್ ಅನ್ನು ಹೊಸಪೋಡು ಬಳಿ ತಡೆದ ಬುಡಕಟ್ಟು ಸೋಲಿಗರು ಬಸ್​ನಲ್ಲಿ ಬರುವ ವ್ಯಕ್ತಿಗಳಿಂದ ಕೊರೋನಾ ಸೋಂಕು ತಗುಲುವ ಸಾಧ್ಯತೆಗಳಿವೆ. ನಗರಪ್ರದೇಶದಿಂದ ಅರಣ್ಯ ಪ್ರದೇಶಕ್ಕೆ ಕೊರೋನಾ ಹರಡುತ್ತದೆ. ಹಾಗಾಗಿ ಸದ್ಯಕ್ಕೆ ಬಸ್ ಬರುವುದು ಬೇಡ ಎಂದು ಒತ್ತಾಯಿಸಿದ್ದಾರೆ. ಬಿಳಿಗಿರಿರಂಗನಬೆಟ್ಟಕ್ಕೆ ಬಸ್ ಬಿಡಬೇಡಿ ಎಂದು ಮೂರ್ನಾಲ್ಕು ದಿನಗಳಿಂದ ಮನವಿ ಮಾಡುತ್ತಿದ್ದರೂ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಚಾಮರಾಜನಗರ ಜಿಲ್ಲಾಡಳಿತ ಪ್ರೇಕ್ಷಣೀಯ ತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿದೆ. ಆದರೆ ಬಿಳಿಗಿರಿರಂಗನಬೆಟ್ಟಕ್ಕೆ ಬರುವ ಭಕ್ತರಿಗೆ ಯಾವುದೇ ನಿರ್ಬಂಧವಿಲ್ಲ. ಹಾಗಾಗಿ ಹೊರ ಊರುಗಳಿಂದ ಭಕ್ತರು ಬಸ್​ಗಳ ಮೂಲಕ ಬೆಟ್ಟಕ್ಕೆ ಬರುವುದು ಸಾಮಾನ್ಯವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!