Saturday, April 17, 2021

ರಾಜ್ಯದಲ್ಲಿ ಮೂವರ ಬಲಿ, 120 ಮಂದಿಗೆ ಸೋಂಕು, 6041ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಗೆ ಬುಧವಾರ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 69ಕ್ಕೇರಿಕೆಯಾಗಿದೆ.
ಬುಧವಾರ ಮತ್ತೆ 120 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆಯಾಗಿದೆ. 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 3108 ಸಕ್ರಿಯ ಪ್ರಕರಣಗಳಿದ್ದು, 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 120 ಸೋಂಕಿತರ ಪೈಕಿ 68 ಮಂದಿ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮೂವರು ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದಾರೆ.
ಬೆಂಗಳೂರು ನಗರದಲ್ಲಿ 42, ಯಾದಗಿರಿಯಲ್ಲಿ 27, ವಿಜಯಪುರದಲ್ಲಿ 13, ಕಲಬುರಗಿಯಲ್ಲಿ 11, ಬೀದರ್ ನಲ್ಲಿ 5, ದಕ್ಷಿಣ ಕನ್ನಡ, ಧಾರವಾಡದಲ್ಲಿ ತಲಾ 4, ದಾವಣಗೆರೆ, ಹಾಸನ, ಬಳ್ಳಾರಿಯಲ್ಲಿ ತಲಾ 3, ಬಾಗಲಕೋಟೆ, ರಾಮನಗರದಲ್ಲಿ ತಲಾ 2, ಬೆಳಗಾವಿಯಲ್ಲಿ 1 ಪ್ರಕರಣಗಳು ವರದಿಯಾಗಿವೆ.
ಮಹಾರಾಷ್ಟ್ರದಿಂದ ಆಗಮಿಸಿದ್ದ ಧಾರವಾಡದ 58 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದರು. ಮೇ23ರಂದು ಕಿಮ್ಸ್ ಗೆ ದಾಖಲಾಗಿದ್ದರು. ಬೆಂಗಳೂರು ನಗರದ 32 ವರ್ಷದ ವ್ಯಕ್ತಿಯನ್ನು ಬುಧವಾರ ಆಸ್ಪತ್ರೆಗೆ ಕರೆತರುವಾಗಲೇ ಮೃತಪಟ್ಟಿದ್ದರು. ನಗರದಲ್ಲಿ ಇನ್ನೋರ್ವ 57 ವರ್ಷದ ವ್ಯಕ್ತಿ ಜ್ವರ, ಕೆಮ್ಮಿನ ಹಿನ್ನೆಲೆಯೊಂದಿಗೆ ಜೂ.8ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!