Saturday, April 17, 2021

ರಾಜ್ಯದಲ್ಲಿಂದು 130 ಮಂದಿಗೆ ಕೊರೋನಾ, ಒಟ್ಟೂ ಸೋಂಕಿತರ ಸಂಖ್ಯೆ 2089

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ನಿರಂತರ ಮೂರನೇ ದಿನವೂ ಶತಕ ಬಾರಿಸಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 130 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಭಾನುವಾರ ಬೆಳಗಿನ ಬುಲೆಟಿನ್’ನಲ್ಲಿ 97 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು. ಸಂಜೆ 33 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರ – 27, ಉಡುಪಿ – 23, ಮಂಡ್ಯ – 15, ಹಾಸನ – 14, ಯಾದಗಿರಿ – 24, ಕಲಬುರಗಿ – 6, ಬೀದರ್ 6, ದಾವಣಗೆರೆ – 4, ಶಿವಮೊಗ್ಗ – 2, ತುಮಕೂರು – 2, ಉತ್ತರ ಕನ್ನಡ -2, ದಕ್ಷಿಣ ಕನ್ನಡ -1, ಕೊಡಗು – 1, ವಿಜಯಪುರ -1, ಧಾರವಾಡ – 1, ಬೆಂಗಳೂರು ನಗರ -1, ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತ ಸಂಖ್ಯೆ 2,089ಕ್ಕೆ ಏರಿಕೆಯಾಗಿದ್ದು, ಭಾನುವಾರ 46 ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಕೊರೋನಾ ಸೋಂಕಿಗೆ 42 ಮಂದಿ ಬಲಿಯಾಗಿದ್ದರೆ, 654 ಸೋಂಕಿತರು ಗುಣಮುಖರಾಗಿದ್ದಾರೆ.
ಭಾನುವಾರ ಒಂದೇ ದಿನ ಕರಾವಳಿಯಲ್ಲಿ 26 ಮಂದಿಗೆ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯೊಂದರಲ್ಲೇ 23 ಮಂದಿಗೆ ಸೋಂಕು ತಗಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಹಾಗೂ ದಕ್ಷಿಣ ಕನ್ನಡದಲ್ಲಿ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!