Monday, April 12, 2021

ರಾಜ್ಯದಲ್ಲಿ 299 ಮಂದಿಗೆ ಕೊರೋನಾ, ಮತ್ತಿಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 299 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾಗಿದೆ. 299 ಸೋಂಕಿತರ ಪೈಕಿ 253 ಮಂದಿ ಮಹಾರಾಷ್ಟ್ರದಿಂದ ಬಂದವರು.
ಭಾನುವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಈ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗರಿಷ್ಠ ಪ್ರಮಾಣದ ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ರಾಯಚೂರಿನಲ್ಲಿ 83, ಯಾದಗಿರಿಯಲ್ಲಿ 44, ಬೀದರ್‌ನಲ್ಲಿ 33, ಬೆಂಗಳೂರು ನಗರದಲ್ಲಿ 21, ದಕ್ಷಿಣ ಕನ್ನಡದಲ್ಲಿ 14, ವಿಜಯಪುರದಲ್ಲಿ 26, ಬೆಳಗಾವಿ ಮತ್ತು ಮಂಡ್ಯದಲ್ಲಿ ತಲಾ 13 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ಬೀದರ್ ಮತ್ತು ರಾಯಚೂರಿನಲ್ಲಿ ಇಬ್ಬರು ಸೋಂಕಿತರು ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. 1,218 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,950 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 15 ಕೊರೋನಾ ಪೀಡಿತರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!