ಬೆಂಗಳೂರು: ತಮಗೆ ಕೊರೋನಾ ಸೋಂಕು ತಗುಲಿದೆ ಎಂದು ಸಿಎಂ ಬಿಎಸ್’ವೈ ಹೇಳಿದ್ದಾರೆ.
ಈ ಬಗ್ಗೆ ಭಾನುವಾರ ರಾತ್ರಿ ಟ್ವೀಟ್ ಮಾಡಿರುವ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ. ನನ್ನ ಕರೊನಾ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿದೆ. ರೋಗ ಲಕ್ಷಣಗಳು ಇಲ್ಲದೆ ಹೋದರೂ ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್-19 ಟೆಸ್ಟ್ಗೆ ಒಳಗಾಗಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಷ್ಟೇ ಅಲ್ಲ ಈಗಲೇ ಕ್ವಾರಂಟೈನ್ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ. ಇತ್ತೀಚೆಗೆ ಯಡಿಯೂರಪ್ಪನವರು ಒಂದು ವಾರ ಸೆಲ್ಫ್ ಕ್ವಾರಂಟೈನ್ಗೆ ಒಳಗಾಗಿ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ವರದಿ ಬಂದಿತ್ತು. ಇಂದು ಕೊವಿಡ್-19 ಸೋಂಕು ದೃಢಪಟ್ಟಿದ್ದಾಗಿ ಸಿಎಂ ತಿಳಿಸಿದ್ದಾರೆ.
ಸಿಎಂಗೆ ಕೊರೋನಾ, ಆಸ್ಪತ್ರೆಗೆ ದಾಖಲು
Follow Us