newsics.com
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರದ ಸೂಚನೆಯಂತೆ, ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯ ಕೋವಿಡ್ ಕಾರ್ಯಪಡೆ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು, ಲಸಿಕೆ ಸಂಗ್ರಹ ಹಾಗೂ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ವಿತರಣೆ ಮಾಡಲು 10,008 ವ್ಯಾಕ್ಸಿನೇಟರ್ ಸಿಬ್ಬಂದಿಯನ್ನು ಗುರುತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಬಗೆಗಿನ ಮಾಹಿತಿಯನ್ನು ದಾಖಲಿಸಲಾಗಿದೆ. ಶೇ.80 ರಷ್ಟು ಖಾಸಗಿ ಆಸ್ಪತ್ರೆಗಳು ಮಾಹಿತಿ ಒದಗಿಸಿದ್ದು, ಇನ್ನೂ ಶೇ.20 ರಷ್ಟು ಆಸ್ಪತ್ರೆಗಳು ವಾರದೊಳಗೆ ಮಾಹಿತಿ ನೀಡಲಿವೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ರಾಜ್ಯದಲ್ಲಿ ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೈನ್ ಕೇಂದ್ರ ಲಭ್ಯವಿದೆ. ಶೀಘ್ರ ಲಸಿಕೆ ವಿತರಣೆ ಮಾಡಲು ಸಾಧ್ಯವಾಗುವಂತೆ ಹೊಸದಾಗಿ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ 10 ವಾಕ್ ಇನ್ ಕೂಲರ್ ಮತ್ತು 4 ವಾಕ್ ಇನ್ ಫ್ರೀಜರ್ ಇದೆ. ಕೇಂದ್ರ ಆರೋಗ್ಯ ಸಚಿವಾಲಯವು 3 ವಾಕ್ ಇನ್ ಕೂಲರ್, 2 ವಾಕ್ ಇನ್ ಫ್ರೀಜರ್ ನೀಡಲಿದೆ. ಇದಕ್ಕಾಗಿ ಕಾಮಗಾರಿ ಆರಂಭವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ನಾಲ್ಕೈದು ವಾರಗಳಲ್ಲಿ ಕೊರೋನಾ ಲಸಿಕೆ ಲಭ್ಯ ಸಾಧ್ಯತೆ- ಸಿಎಂ
ಸಚಿವ ಸುರೇಶಕುಮಾರ್ ಹೇಳಿಕೆಗೆ ಕ್ಯಾಮ್ಸ್ ಕಿಡಿ; ಆನ್ಲೈನ್ ಕ್ಲಾಸ್ ಬಂದ್ ಎಚ್ಚರಿಕೆ
‘ವರ್ಷದ ಪದ’ ಆಯ್ಕೆಯಲ್ಲಿ ಆಕ್ಸ್’ಫರ್ಡ್ ನಿಘಂಟು ವಿಫಲ
ಚಿನ್ನ ಅಕ್ರಮ ಸಾಗಣೆ; ಏರ್ ಇಂಡಿಯಾ ಸಿಬ್ಬಂದಿ ಬಂಧನ