Friday, May 20, 2022

ರಾಜ್ಯದಲ್ಲಿ ಕೊರೋನಾ ಸ್ಫೋಟ: 50,210 ಮಂದಿಗೆ ಸೋಂಕು, 22,282 ಜನ ಗುಣಮುಖ, 19 ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಕೊರೋನಾ ಮಹಾಸ್ಪೋಟವೇ ಸಂಭವಿಸಿದೆ. ಈವರೆಗೆ 40 ಸಾವಿರ ಆಸುಪಾಸಿನಲ್ಲಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಭಾನುವಾರ ಐವತ್ತು ಸಾವಿರ ದಾಟಿದೆ.

ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ 2,20,459 ಮಂದಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನ 26,299 ಸೇರಿದಂತೆ ರಾಜ್ಯಾದ್ಯಂತ 50,210 ಜನರಿಗೆ ಕೋವಿಡ್ ಸೋಂಕು ತಗುಲಿದೆ.
ರಾಜ್ಯದಲ್ಲಿ ಇಂದು ಒಟ್ಟು 22,282 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟು 3,57,796 ಮತ್ತು ಬೆಂಗಳೂರಿನಲ್ಲಿ 2,31,000ಕ್ಕೆ ಏರಿಕೆ ಕಂಡಿದೆ.

ಪಾಸಿಟಿವಿಟಿ ದರ ಶೇ.22.77ಕ್ಕೆ ಏರಿಕೆಯಾಗಿದೆ. ಸೋಂಕಿತರಾದ 22,842 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ಸದ್ಯ ಬೆಂಗಳೂರಿನಲ್ಲಿ 2.31 ಲಕ್ಷ ಸೇರಿದಂತೆ ರಾಜ್ಯದಲ್ಲಿ 3,57,796 ಸಕ್ರೀಯ ಸೋಂಕಿತರಿದ್ದಾರೆ.

ಕಳೆದ 24 ಗಂಟೆಯಲ್ಲಿ ಸೋಂಕಿನಿಂದಾಗಿ ಬೆಂಗಳೂರಿನಲ್ಲಿ 8 ಮಂದಿ ಸೇರಿದಂತೆ ರಾಜ್ಯದಲ್ಲಿ 19 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿಂದು 165 ಹೊಸ ಓಮಿಕ್ರಾನ್ ಕೇಸ್‍ಗಳು ವರದಿಯಾಗಿದೆ. ಅಲ್ಲದೇ ಬೆಂಗಳೂರಿನಲ್ಲಿಯೇ 165 ಓಮಿಕ್ರಾನ್ ಕೇಸ್‍ಗಳು ದಾಖಲಾಗಿದೆ. ದಿನೇ ದಿನೇ ರಾಜ್ಯ ರಾಜಧಾನಿಯಲ್ಲಿ ಓಮಿಕ್ರಾನ್ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಕಂಡುಬಂದ ಓಮಿಕ್ರಾನ್ ಸೋಂಕಿತರಲ್ಲಿ ಬಹುಪಾಲು ಬೆಂಗಳೂರಿನಲ್ಲೆ ಪತ್ತೆಯಾಗಿದೆ.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಕೊರೋನಾ ಸೋಂಕು

ಕೊರೋನಾ ನಿರ್ಬಂಧ: ಬಾಡಿಗೆ ವಿಮಾನ ಉದ್ಯಮಕ್ಕೆ ನಷ್ಟ

ಒಂದೇ ದಿನ 3,33,533 ಮಂದಿಗೆ ಕೊರೋನಾ ಸೋಂಕು, 525 ಜನರ ಸಾವು

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ನೇತಾಜಿ ಪ್ರಶಸ್ತಿ

ಮತ್ತಷ್ಟು ಸುದ್ದಿಗಳು

Latest News

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

newsics.com ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ. ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ...
- Advertisement -
error: Content is protected !!