newsics.com
ಬೆಂಗಳೂರು: ರಾಜ್ಯದಲ್ಲಿ ಭಾನುವಾರ 9,894 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 4,59,445ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಭಾನುವಾರ 104 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟಾರೆಯಾಗಿ 7,265ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ ಭಾನುವಾರ 3,479 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. 45 ಸೋಂಕಿತರು ಸಾವನ್ನಪ್ಪಿದ್ದಾರೆ.
ಈವರೆಗೆ 3,52,958 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರಾಜ್ಯದಲ್ಲಿ ಈಗ 99,203 ಸಕ್ರಿಯ ಸೋಂಕಿತರಿದ್ದಾರೆ.