Wednesday, July 6, 2022

ದೇಶದಲ್ಲಿ 2022 ಮಂದಿಗೆ ಕೊರೋನಾ ಸೋಂಕು, 46 ಜನ ಸಾವು

Follow Us

newsics.com
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,022 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 46 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,38,393ಕ್ಕೆ ಏರಿಕೆಯಾಗಿದೆ. ಕೋವಿಡ್‌ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,459ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 14,832ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,099 ಮಂದಿ ಗುಣಮುಖರಾಗಿದ್ದು, ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 4,25,99,102ಕ್ಕೆ ತಲುಪಿದೆ.
ದೇಶದಲ್ಲಿ 2,94,812 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 84,70,92,226 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಈವರೆಗೆ 1,92,38,45,615 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಎಸ್‍ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ಇನ್ನಿಲ್ಲ

15 ದೇಶಗಳಿಗೆ ಪ್ರಯಾಣ ನಿಷೇಧಿಸಿದ ಸೌದಿ ಅರೇಬಿಯಾ

ಮೊಜಾಂಬಿಕ್ ನಲ್ಲಿ 30 ವರ್ಷಗಳ ಬಳಿಕ ಪೋಲಿಯೊ ಪತ್ತೆ

ಮಂಕಿಪಾಕ್ಸ್ ಪ್ರಕರಣ : ಬೆಲ್ಜಿಯಂನಲ್ಲಿ 21 ದಿನ ಕ್ವಾರಂಟೈನ್ 

ಮತ್ತಷ್ಟು ಸುದ್ದಿಗಳು

vertical

Latest News

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...
- Advertisement -
error: Content is protected !!