Monday, November 29, 2021

ಒಂದೇ ದಿನ 12 ಮಂದಿಗೆ ಕೊರೋನಾ, ಸೋಂಕುಪೀಡಿತರ ಸಂಖ್ಯೆ 163ಕ್ಕೆ ಏರಿಕೆ

Follow Us

ಬೆಂಗಳೂರು: ಸೋಮವಾರ ರಾಜ್ಯದಲ್ಲಿ 12 ಕೊರೋನಾ ವೈರಸ್ ಕೇಸ್ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಪೀಡಿತರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 7 ಜನರಿಗೆ, ಬೆಂಗಳೂರಿನಲ್ಲಿ 2, ಬಾಗಲಕೋಟೆಯಲ್ಲಿ 2 ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿ ಕೇರಳ ಮೂಲದ ವ್ಯಕ್ತಿಗೂ ಕೊರೋನಾ ಸೋಂಕು ತಗುಲಿದೆ. ಅಲ್ಲದೇ ಮೈಸೂರಿನಿಂದ ದೆಹಲಿಯ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ಸೇರಿದಂತೆ 7 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ.
ಬಾಗಲಕೋಟೆಯ ಇಬ್ಪರಿಗೆ ಸೇರಿದಂತೆ ಇಂದು ಒಂದೇ ದಿನ ರಾಜ್ಯದಲ್ಲಿ 12 ಕೊರೋನಾ ವೈರಸ್ ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 163ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನಿಂದಾಗಿ ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!