newsics.com
ಬೆಂಗಳೂರು: ಒಮಿಕ್ರೋನ್ ಕೋವಿಡ್ ರೂಪಾಂತರಿ ಆತಂಕದ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ ಇಬ್ಬರಲ್ಲಿ ಕೊರೋನಾ ಸೊಂಕು ಕಾಣಿಸಿಕೊಂಡಿದೆ.
ನ.1ರಿಂದ ನ.26ರವರೆಗೆ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಈ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡುಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದರೆ, ಇವರಲ್ಲಿ ಒಮಿಕ್ರೋನ್ ವೈರಸ್ ಕಂಡು ಬಂದಿರುವುದರ ಬಗ್ಗೆ ಖಚಿತ ಮಾಹಿತಿಯಿಲ್ಲ.
ಉತ್ತರ ಕನ್ನಡದಲ್ಲಿ ಹೆಚ್ಚಿದ ಮಹಿಳೆಯರ ನಾಪತ್ತೆ ಪ್ರಕರಣ: ಮತ್ತೆ ಗರಿಗೆದರಿದ ಲವ್ ಜಿಹಾದ್ ಗುಮಾನಿ