ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 54 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆಯಾಗಿದೆ.
ಭಾನುವಾರ ಕೊರೋನಾ ಸೋಂಕಿಗೆ ತುತ್ತಾದವರಲ್ಲಿ ಹೆಚ್ಚಿನವರು ರಾಜಸ್ತಾನದಲ್ಲಿರುವ ಧಾರ್ಮಿಕ ಕೇಂದ್ರವೊಂದಕ್ಕೆ ಭೇಟಿ ನೀಡಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ಇದೆ ಮೊದಲ ಬಾರಿಗೆ ಎಂಟು ಕೊರೋನಾ ಪ್ರಕರಣ ದೃಢಪಟ್ಟಿದೆ. ಬೆಳಗಾವಿಯಲ್ಲಿ 22 ಕೊರೋನಾ ಪ್ರಕರಣ ವರದಿಯಾಗಿದೆ.
ಮೇ 7ರಂದು ಮೃತಪಟ್ಟಿದ್ದ ಬೆಂಗಳೂರು ನಗರದ 56 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
422 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೆಟಿನ್ ಮಾಹಿತಿ ನೀಡಿದೆ. 394 ರೋಗಿಗಳಲ್ಲಿ 388 ರೋಗಿಗಳು ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಹಾಗೂ 6 ವ್ಯಕ್ತಿಗಳನ್ನು ಐಸಿಯುನಲ್ಲಿ ಇಡಲಾಗಿದೆ.
ಬೆಂಗಳೂರು ನಗರದಲ್ಲಿ 3, ಬೆಳಗಾವಿಯಲ್ಲಿ 22, ಶಿವಮೊಗ್ಗ 8, ಬಾಗಲಕೋಟೆಯಲ್ಲಿ 8, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 7, ಕಲಬುರಗಿಯಲ್ಲಿ 4, ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.