newsics.com
ನವದೆಹಲಿ : ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 92,071 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನ 1,136 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 79,772 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 48,46,428 ಮಂದಿ ಕೊರೋನಾ ಸೋಂಕಿತರಲ್ಲಿ, 37,80,108 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು 9,86,598 ಮಂದಿ ಕೊರೋನಾದಿಂದ ಬಳಲುತ್ತಿದ್ದಾರೆ.
ದೇಶದಲ್ಲಿ ಒಂದೇ ದಿನ 92,071 ಮಂದಿಗೆ ಕೊರೋನಾ ಸೋಂಕು, 1136 ಬಲಿ
Follow Us