Monday, April 12, 2021

10 ಸಾವಿರ ಜನರ ಮೇಲೆ ಕೊರೋನಾ ಲಸಿಕೆ ಪ್ರಯೋಗ- ಆಕ್ಸ್‌ಫರ್ಡ್ ವಿವಿ

ಲಂಡನ್: ಕೊರೋನಾ ಲಸಿಕೆಯ ಮಾನವ ಪ್ರಯೋಗಕ್ಕಾಗಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಮುಂದಾಗಿದೆ.
ಇದಕ್ಕಾಗಿ ಸಾವಿರಾರು ಸ್ವಯಂಸೇವಕರನ್ನು ನೇಮಿಸಿಕೊಳ್ಳುತ್ತಿರುವುದಾಗಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ತಿಳಿಸಿದೆ.
ದಕ್ಷಿಣ ಮಧ್ಯ ಇಂಗ್ಲೆಂಡ್‌ನಲ್ಲಿರುವ ವಿಶ್ವವಿದ್ಯಾಲಯವು ಏಪ್ರಿಲ್’‌ನಲ್ಲಿ ಆರಂಭಿಕ ಪ್ರಯೋಗಗಳನ್ನು ಆರಂಭಿಸಿದೆ. ಈಗಾಗಲೇ 1,000ಕ್ಕೂ ಅಧಿಕ ಮಂದಿಗೆ ಲಸಿಕೆ ಕೊಡಲಾಗಿದೆ. ಆ ಪ್ರಯೋಗದ ಮುಂದಿನ ಭಾಗವನ್ನು ಈಗ ನಡೆಸಲಾಗುತ್ತಿದೆ.
ಮಾದರಿ ಲಸಿಕೆ ನೀಡುವ ವಯೋ ಗುಂಪನ್ನು ವಿಸ್ತರಿಸಲಾಗಿದ್ದು, ಸುಮಾರು 10,260 ವಯಸ್ಕರು ಮತ್ತು ಮಕ್ಕಳನ್ನು ಪ್ರಯೋಗಕ್ಕೆ ಆಯ್ಕೆ ಮಾಡಲಾಗಿದೆ. ಕ್ಲಿನಿಕಲ್ ಅಧ್ಯಯನಗಳು ಉತ್ತಮವಾಗಿ ಸಾಗುತ್ತಿವೆ ಎಂದು ಆಕ್ಸ್‌ಫರ್ಡ್ ಲಸಿಕೆ ಗುಂಪಿನ ಮುಖ್ಯಸ್ಥ ಆಡ್ರೂ ಪೊಲಾರ್ಡ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!