Tuesday, October 4, 2022

ದೇಶದ ಎಲ್ಲರಿಗೂ ಕೊರೋನಾ ಲಸಿಕೆ ಉಚಿತ- ಕೇಂದ್ರ ಸಚಿವ ಸಾರಂಗಿ

Follow Us

newsics.com
ನವದೆಹಲಿ: ದೇಶದ ಎಲ್ಲರಿಗೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ.
ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಮೋದಿಯವರೂ ಹೇಳಿದ್ದಾರೆ. ಪ್ರತಿ ವ್ಯಕ್ತಿಗೂ ಕೋವಿಡ್ ಲಸಿಕೆ ಹಾಕಲು ಅಂದಾಜು 500 ರೂ.ಗಳನ್ನು ಖರ್ಚು ಮಾಡಲಾಗುವುದು ಎಂದು ಬಾಲಂಗೋನರ್ ನಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆಯ ಪ್ರಚಾರ ಸಭೆಯ ಬಳಿಕ ಸಾರಂಗಿ ಸುದ್ದಿಗಾರರಿಗೆ ತಿಳಿಸಿದರು.
ಬಿಹಾರ ವಿಧಾನಸಭಾ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಬಿಹಾರಕ್ಕೆ ಉಚಿತ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿತ್ತು. ವಿಶ್ವವನ್ನೇ ಕಾಡುತ್ತಿರುವ ಕೊರೋನಾಗೆ ಬಿಹಾರದ ಜನರಿಗೆ ಉಚಿತ ಲಸಿಕೆ ನೀಡುವುದಾಗಿ ಘೋಷಿಸಿದ್ದ ಬಿಜೆಪಿಯ ನಡೆಗೆ ಸಾಕಷ್ಟು ವಿರೋಧ, ಟೀಕೆಗಳು ವ್ಯಕ್ತವಾಗಿದ್ದವು.
ಸಾರ್ವಜನಿಕರು ಹಾಗೂ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾದ ನಂತರ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ
ದೇಶದ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವುದಾಗಿ ಘೋಷಿಸಿದೆ.

ಶಿಕ್ಷಕರ ಬೋಧನಾ ಕಾರ್ಯ; ಜಾಗತಿಕವಾಗಿ ಭಾರತಕ್ಕೆ 6ನೇ ಸ್ಥಾನ

ಖ್ಯಾತ ವಕೀಲ ಹರೀಶ್ ಸಾಳ್ವೆ ಎರಡನೇ ಮದುವೆಗೆ ಸಿದ್ಧತೆ!

ಪಿಲಿಕುಳದ ಹಿರಿಯ ‘ವಿಕ್ರಂ’ ಇನ್ನಿಲ್ಲ

ಆಪಲ್ ಆಪ್ ಸ್ಟೋರ್ ನಿಂದ ಗೂಗಲ್ ಪೇ ಹೊರಕ್ಕೆ

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!