Wednesday, November 30, 2022

ನದಿಗಳ ನೀರಲ್ಲೂ ಕೊರೋನಾ‌ ವೈರಸ್ ಪತ್ತೆ!

Follow Us

newsics.com

ನವದೆಹಲಿ: ನದಿಗಳ‌ ನೀರಲ್ಲೂ ಕೊರೋನಾ‌ ವೈರಸ್ ಪತ್ತೆಯಾಗಿದ್ದು, ಆತಂಕಕ್ಜೆ ಕಾರಣವಾಗಿದೆ.

ಗಾಂಧಿನಗರ ಐಐಟಿ ನಡೆಸಿದ ಸಂಶೋಧನೆಯಲ್ಲಿ ಈ‌ ಆಘಾತಕಾರಿ‌ ವಿಚಾರ ಬೆಳಕಿಗೆ ಬಂದಿದೆ. ಅಹ್ಮದಾಬಾದ್ ನ ಸಬರಮತಿ, ಕಾಂಕರಿಯಾ, ಚಂದೋಲಾ ನದಿಯಲ್ಲಿ ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ.

ಪ್ರೊ.ಮನೀಶ್ ಕುಮಾರ್ ನೇತೃತ್ವದಲ್ಲಿ ಸೋಂಕಿನ ಬಗ್ಗೆ 8 ಸಂಸ್ಥೆಗಳೊಂದಿಗೆ ಗಾಂಧಿನಗರ ಐಐಟಿ ನಡೆಸಿದ ಅಧ್ಯಯನದಲ್ಲಿ ನದಿ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದಾಗ ನೀರಿನಲ್ಲೂ ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ.

2020ರ ಸೆ.3ರಿಂದ 2020ರ ಡಿ.29ರವರೆಗೆ ನೀರು ಸಂಗ್ರಹಿಸಿ ಕೊರೋನಾ ಟೆಸ್ಟ್ ನಡೆಸಲಾಗಿದೆ. ಸಬರಮತಿ ನದಿಯಿಂದ 694, ಕಾಂಕರಿಯಾ ನದಿಯಿಂದ 549, ಚಂದೋಲಾ ನದಿಯಿಂದ 402 ಸ್ಯಾಂಪಲ್ ಸಂಗ್ರಹಿಸಲಾಗಿದೆ. ಪ್ರತಿ ವಾರ ಈ ಮೂರು ನದಿಯ ನೀರಿನ ಮಾದರಿ ಸಂಗ್ರಹ ಮಾಡಲಾಗುತ್ತಿತ್ತು ಎನ್ನಲಾಗಿದೆ. ನೀರಿನಲ್ಲಿ ವೈರಸ್ ಪತ್ತೆಯಾಗಿರುವುದನ್ನು ಸಂಶೋಧನಾ ತಂಡ ಸ್ಪಷ್ಟಪಡಿಸಿದೆ.

ದೇಶದ ಎಲ್ಲ ನದಿಗಳ ನೀರನ್ನು ಟೆಸ್ಟ್ ಮಾಡಬೇಕೆಂದು ಅಧ್ಯಯನ ತಂಡ ಮನವಿ ಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!